Rain Intensifies; Red Alert Issued
ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ದುರ್ಬಲವಾಗಿತ್ತು. ಇದರಿಂದ ಮಂಗಳವಾರ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:-ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯಕ್ಕೆ ಸಿದ್ದತೆ : ಗ್ರಾ.ಪಂʼಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಅ.16ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅ.17ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…