Mysore
21
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ರಾಜ್ಯದ ಕೆಲವೆಡೆ ಇಂದು ನಾಳೆ ಭಾರಿ ಮಳೆಯಾಗುವ ಸಾಧ್ಯತೆ

ಮೈಸೂರು: ರಾಜ್ಯಾ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಹಾಗೂ ಕೊಡಗು ಜಿಲ್ಲೆಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಇದರಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿದ ಉಳಿದ ಜಿಲ್ಲೆಗಳಲ್ಲಿ ಹಾಗೂ ಉತ್ತ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ಕರಾವಳಿ ಉದ್ದಕ್ಕೂ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವೂ ಇರಲಿದೆ. ಗಂಟೆಗೆ 35ಕಿ.ಮೀ ಗಳಿಂದ 55ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಮುನ್ನೆಚ್ಚರಿಗೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ

 

 

 

Tags:
error: Content is protected !!