ಬೆಂಗಳೂರು: ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಮಧ್ಯೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಕೇರಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಸಿಲಿಕಾನ್ ಸಿಟಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಂಜೆ ವೇಳೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗಾಳಿಯು ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.





