ರಾಜ್ಯ

ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಮಧ್ಯೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಕೇರಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಸಂಜೆ ವೇಳೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

1 hour ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

2 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

2 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

2 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

3 hours ago