ಬೆಂಗಳೂರು: ರಾಜ್ಯದ ಹಲವೆಡೆ ಏ.2 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಿಗೆ ʼಆರೆಂಜ್ ಅಲರ್ಟ್ʼ ಘೋಷಿಸಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗೆ ʼಯೆಲ್ಲೊ ಅಲರ್ಟ್ʼ ನೀಡಿದೆ. ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.