ರಾಜ್ಯ

ಭಾರೀ ಮಳೆ ಹಿನ್ನೆಲೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲೂ ಎಡಬಿಡದೆ ಮಳೆಯಾಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನದಿ ತೀರ ಹಾಗೂ ಬೆಟ್ಟ ಗುಡ್ಡಗಳ ಪ್ರದೇಶಗಳಲ್ಲಿ ವಾಸಿಸುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago