ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ಗೆ 5 ಎಲಿಮೆಂಟ್‌ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ.
ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು ಸಹ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅನ್ನದಾತರು ಸಂತಸಗೊಂಡಿದ್ದು, ಡ್ಯಾಂ ಮತ್ತೆ ಭರ್ತಿಯಾಗುವ ಮುನ್ಸೂಚನೆ ಕಾಣುತ್ತಿದೆ.
ಚೈನ್ ಲಿಂಕ್ ಕಟ್ ಆಗಿ ಜಾರಿ ಹೋಗಿದ್ದ 19ನೇ ಕ್ರಸ್ಟ್ ಗೇಟ್‌ಗೆ 5 ಎಲಿಮೆಂಟ್‌ಗಳನ್ನು ಅಳವಡಿಕೆ ಮಾಡಿ ಗೇಟ್ ಮೂಲಕ ನೀರಿನ ಹೊರಹರಿವನ್ನು ಬಂದ್ ಮಾಡಲಾಗಿದೆ. ಡ್ಯಾಂನ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 105.79 ಟಿಎಂಸಿ ಇದೆ. ಸದ್ಯ ಡ್ಯಾಂನಲ್ಲಿ 71.14 ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಸಮಯದಲ್ಲಿ 87.56 ಅಡಿ ನೀರಿನ ಸಂಗ್ರಹವಿತ್ತು.
ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಪರಿಣಾಮ ಪ್ರತಿ ದಿನ ಮೂರರಿಂದ ನಾಲ್ಕು ಟಿಎಂಸಿ ನೀರು ನದಿಯಲ್ಲಿ ಒಳಹರಿವು ಇದೆ. ಮಾಹಿತಿಗಳ ಪ್ರಕಾರ ಮುಂದಿನ ವಾರದಲ್ಲಿ ಮಲೆನಾಡು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದ್ದು, ನಿಸರ್ಗದ ಕೃಪೆಯಿಂದ ಮುಂದಿನ 10 ದಿನಗಳ ಒಳಗೆ ಡ್ಯಾಂ ತುಂಬುವ ಸಾಧ್ಯತೆಯಿದೆ. ಹಾಗಾಗಿ ಯಾರೂ ಕೂಡ ಆತಂಕ ಪಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಈ ಮೂಲಕ ಆ ಭಾಗದ ಅನ್ನದಾತರಿಗೆ ಕೊಂಚ ನೆಮ್ಮದಿ ಸಿಕ್ಕದಂತಾಗಿದ್ದು, ಈ ಬಾರಿಯಾದರೂ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…