ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಾಮರಾಜನಗರದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಮಂಡ್ಯ, ಮೈಸೂರು, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.




