Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಹಾಗೂ ನಾಳೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದ್ದು, ಕೆಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ಸಿಡಿಲಿನ ಆಘಾತ ಹೆಚ್ಚಾಗಿರುವುದರಿಂದ ಹವಾಮಾನ ಇಲಾಖೆ ಜನತೆಗೆ ಸೂಚನೆ ನೀಡಿದ್ದು, ಮರದ ಕೆಳಗೆ ನಿಲ್ಲಬಾರದು. ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಬೇಕು. ಕಾಂಕ್ರೀಟ್‌ ಮಹಡಿಗಳ ಮೇಲೆ ಮಲಗಬಾರದು. ವಿದ್ಯುತ್‌ ವಸ್ತುಗಳನ್ನು ಅನ್‌ಪ್ಲಗ್‌ ಮಾಡಬೇಕು. ನೀರಿನಲ್ಲಿದ್ದರೆ ತಕ್ಷಣ ಹೊರಬರಬೇಕು ಎಂದು ಸೂಚನೆ ನೀಡಿದೆ.

Tags:
error: Content is protected !!