ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಹಾಗೂ ನಾಳೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದ್ದು, ಕೆಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಸಿಡಿಲಿನ ಆಘಾತ ಹೆಚ್ಚಾಗಿರುವುದರಿಂದ ಹವಾಮಾನ ಇಲಾಖೆ ಜನತೆಗೆ ಸೂಚನೆ ನೀಡಿದ್ದು, ಮರದ ಕೆಳಗೆ ನಿಲ್ಲಬಾರದು. ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಬೇಕು. ಕಾಂಕ್ರೀಟ್ ಮಹಡಿಗಳ ಮೇಲೆ ಮಲಗಬಾರದು. ವಿದ್ಯುತ್ ವಸ್ತುಗಳನ್ನು ಅನ್‌ಪ್ಲಗ್ ಮಾಡಬೇಕು. ನೀರಿನಲ್ಲಿದ್ದರೆ ತಕ್ಷಣ ಹೊರಬರಬೇಕು ಎಂದು ಸೂಚನೆ ನೀಡಿದೆ.
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…