ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಠಾತ್ ಮಳೆಯ ಬದಲಾವಣೆಗೆ ನೈರುತ್ಯ ಮುಂಗಾರು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ ಭಾಗಗಳಿಗೆ ಮುಂದುವರಿಯುತ್ತಿರುವುದು ಕಾರಣವಾಗಿದೆ. ಮುಂಗಾರು ಮಾಲ್ಡೀವ್ಸ್, ಕೊಮೊರಿನ್ ಪ್ರದೇಶ ಮತ್ತು ಬಂಗಾಳ ಕೊಲ್ಲಿಯ ಮಧ್ಯ ಭಾಗಕ್ಕೂ ಪ್ರವೇಶಿಸುವ ಸಾಧ್ಯತೆಯಿದೆ.
ಇದನ್ನೂ ಓದಿ:- ಮೇ.17ರಿಂದ ಮತ್ತೆ ಐಪಿಎಲ್ ಆರಂಭ
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.





