ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್.16ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗುತ್ತಿದ್ದು, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸಾಗಲಿದೆ.
ಇದನ್ನು ಓದಿ : ಉತ್ತರಾಖಂಡ್‌ನಲ್ಲಿ ಧಾರಾಕಾರ ಮಳೆ: ಭಾರೀ ಪ್ರವಾಹ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಳಗಾವಿ, ಕೊಪ್ಪಳ, ಯಾದಗಿರಿ, ಗದಗ, ಧಾರವಾಡ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್.14ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದ್ದು, ಕಲಬುರ್ಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.





