ರಾಜ್ಯ

ನೇಪಾಳದಲ್ಲಿ ಗುಡ್ಡ ಕುಸಿತಕ್ಕೆ ಸಿಲುಕಿದ ಬೆಂಗಳೂರಿನ ಯಾತ್ರಾರ್ಥಿಗಳು

ಬೆಂಗಳೂರು : ನೇಪಾಳದಲ್ಲೂ ಕೂಡ ಭಾರೀ ಮಳೆಯಾಗುತ್ತಿರುವ ಕಾರಣ ಬೆಟ್ಟ ಗುಡ್ಡ ಕುಸಿದು ಸಂಕಷ್ಟಕ್ಕೆ  ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.

ಬೆಂಗಳೂರಿನಿಂದ ಎರಡು ದಿನದ ಹಿಂದೆ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ಸುಮಾರು ೫೦ ಮಂದಿ ಯಾತ್ರಾರ್ಥಿಗಳು ತೆರಳಿದ್ದರು.  ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ವಾಹನಗಳು ಪಲ್ಟಿಯಾಗಿದೆ. ಅಲ್ಲದೆ ನಡುರಸ್ತೆಯಲ್ಲಿಯೇ ಗುಡ್ಡ ಕುಸಿದಿರುವುದರಿಂದ ಸಂಚರಿಸಲು ಸಾಧ್ಯವಾಗದೆ ರಸ್ತೆ ಮಧ್ಯೆಯೇ ಯಾತ್ರಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.

ನೇಪಾಳದ ಪ್ರೋಕ್ರದಿಂದ ಮುಕ್ತಿನಾಥ ದೇವಾಲಯ ರಸ್ತೆಯಲ್ಲಿ ಯಾತ್ರಾರ್ಥಿಗಳು ಸಿಲುಕಿದ್ದು, ಆಕಡೆ ದೇವಾಲಯಕ್ಕೂ ಹೋಗಲಾರದೆ ಇತ್ತ ವಾಪಸ್‌ ಬರಲಾಗದೆ ರಸ್ತೆ ಮಧ್ಯೆ ನಿಂತು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

3 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

3 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

3 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

3 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

3 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

17 hours ago