ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ಇದನ್ನು ಓದಿ : ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆಹಾನಿ: ಸಚಿವ ಚಲುವರಾಯಸ್ವಾಮಿ
ಇಂದು ಹಾಗೂ ನಾಳೆ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕರ್ನಾಟಕದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಕಳೆದ ತಡರಾತ್ರಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.





