ರಾಜ್ಯ

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: ಇನ್ನೂ 2 ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಇದನ್ನು ಓದಿ : ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆಹಾನಿ: ಸಚಿವ ಚಲುವರಾಯಸ್ವಾಮಿ

ಇಂದು ಹಾಗೂ ನಾಳೆ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕರ್ನಾಟಕದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನು ಕಳೆದ ತಡರಾತ್ರಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago