ರಾಜ್ಯ

ಆಗಸ್ಟ್.‌6ರ ಬಳಿಕ ರಾಜ್ಯದಲ್ಲಿ ಮಳೆಯ ಅಬ್ಬರ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಆಗಸ್ಟ್.‌6ರ ಬಳಿಕ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಆಗಸ್ಟ್.‌6ರ ಬಳಿಕ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಹಾವೇರಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago