ಬೆಂಗಳೂರು : ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 14 ರಿಂದ ಮಳೆ ತೀವ್ರತೆ ಹೆಚ್ಚಾಗಲಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯಾಗಲಿದೆ.





