Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸತತ ಮಳೆ, ತೇವಾಂಶದಿಂದ ಬೆಳೆಗಳಿಗೆ ಹಾನಿ; ರೈತರಿಗೆ ಸಂಕಷ್ಟ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೀದರ್‌, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags:
error: Content is protected !!