ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಸತತ ಮಳೆ, ತೇವಾಂಶದಿಂದ ಬೆಳೆಗಳಿಗೆ ಹಾನಿ; ರೈತರಿಗೆ ಸಂಕಷ್ಟ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…