Mysore
25
overcast clouds

Social Media

ಶನಿವಾರ, 18 ಜುಲೈ 2026
Light
Dark

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ.20ರಿಂದ 26ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆ ಜೊತೆಗೆ ಬಿರುಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

 

Tags:
error: Content is protected !!