ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜೂನ್.15ರವರೆಗೂ ಇದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.




