ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಇನ್ನು ಐದು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು, ಮೈಸೂರು,ಮಂಡ್ಯ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ ರಾಮನಗರ ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದಾನೆ.
ಇನ್ನು ಬೆಳ್ತಂಗಡಿ,ಧರ್ಮಸ್ಥಳ,ಸುಳ್ಯ, ಕೊಲ್ಲೂರು, ಶೃಂಗೇರಿ, ಲಿಂಗನಮಕ್ಕಿ, ಕಳಸ, ದಾವಣಗೆರೆ, ಬೆಳ್ಳೂರು, ಕೃಷ್ಣರಾಜಪೇಟೆ, ವಿರಾಜಪೇಟೆ,ಸೋಮವಾರಪೇಟೆಯಲ್ಲಿ ಈಗಾಗಲೇ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ.





