ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ಮಳೆಯಾಗುತ್ತಿರುವ ಪರಿಣಾಮ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ನೀರನ್ನು ಸಹ ಹೊರಬಿಡಲಾಗಿದೆ. ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಅನ್ನದಾತರು ಭಾರೀ ಆದಾಯದ ನಿರೀಕ್ಷೆಯಲ್ಲಿದ್ದಾರೆ.





