ರಾಜ್ಯ

ಸೆ.21ರವರೆಗೂ ರಾಜ್ಯದಲ್ಲಿ ಧಾರಾಕಾರ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.‌21ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ರಾಜ್ಯದ ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ.

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್.‌21ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಹುಲಿಗಳ ಸಂರಕ್ಷಣೆ; ಆದಿವಾಸಿಗಳ ಹಿತರಕ್ಷಣೆ ನಡುವೆ ಇರಲಿ ಸಮನ್ವಯ

ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ಬೀದರ್‌, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago