Mysore
32
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

rain

ಬೆಂಗಳೂರು: ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಮಂಗಳೂರು, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್‌ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದ್ದು, ಅಕ್ಟೋಬರ್.‌1ರಿಂದ ಮಳೆ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ.

ಇದನ್ನು ಓದಿ : ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯಾಗುವ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್.‌30ರವರೆಗೆ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!