rain
ಬೆಂಗಳೂರು: ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಂಗಳೂರು, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದ್ದು, ಅಕ್ಟೋಬರ್.1ರಿಂದ ಮಳೆ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ.
ಇದನ್ನು ಓದಿ : ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯಾಗುವ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್.30ರವರೆಗೆ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…