ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ.
ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್ ವೇವ್ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಈ ಭಾಗದಲ್ಲಿ ಏಕಾಏಕಿ 5 ಡಿಗ್ರಿಯಷ್ಟು ಗರಿಷ್ಠ ತಾಪಮಾನ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರಾವಳಿಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆಗೆ ಕೊಟ್ಟಿದೆ.
ಇನ್ನು ವಾಡಿಕೆಗಿಂತ ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳ ವೇಳೆಗೆ ಜನರು ಈ ಪ್ರಮಾಣದ ಬಿಸಿಲಿನ ಅಬ್ಬರವನ್ನು ಎದುರಿಸುತ್ತಿದ್ದರು. ಆದರೆ ಈ ಬಾರಿ ಫೆಬ್ರವರಿಯಲ್ಲೇ ಸೂರ್ಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.
ಈ ಬಾರಿ ವಾಡಿಕೆಗಿಂತ ಬಿಸಿಲಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದು, ಎಳನೀರಿಗಂತೂ ಭಾರೀ ಡಿಮ್ಯಾಂಡ್ ಆಗಿದೆ.
ಒಂದು ಎಳನೀರಿನ ಬೆಲೆ 60 ರಿಂದ 70 ರೂ ಏರಿಕೆಯಾಗಿದ್ದು, ತಂಪು ಪಾನೀಯಗಳ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ.
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…