Mysore
28
moderate rain

Social Media

ಬುಧವಾರ, 25 ಜೂನ್ 2025
Light
Dark

ಹೊಸ ವರ್ಷದ ಸ್ವಾಗತಕ್ಕೆ ಹಂಪಿಯತ್ತ ಮುಖ ಮಾಡಿದ ಪ್ರವಾಸಿಗರು

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ಹಂಪಿಗೆ ಪ್ರವಾಸಿಗರ ದಂಡೇ ಮುಖ ಮಾಡಿದೆ.

ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಲು ಸಹಸ್ರಾರು ಪ್ರವಾಸಿಗರು ಈಗಾಗಲೇ ಜಮಾಯಿಸಿದ್ದಾರೆ.

ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಆದರೆ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ನ್ಯೂ ಇಯರ್‌ ಸೆಬಬ್ರೇಷನ್‌ಗೆ ಇಂದು ಮತ್ತು ನಾಳೆ ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಾಧ್ಯತೆಯಿದೆ.

ಇನ್ನು ಹಂಪಿಗೆ ಭೇಟಿ ನೀಡುವ ಪ್ರವಾಸಿಗರು ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ಧಾರ್ಮಿಕ ಕ್ಷೇತ್ರ ಹಂಪಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪ್ರಮುಖ ರಸ್ತೆಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

 

Tags:
error: Content is protected !!