ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ಹಂಪಿಗೆ ಪ್ರವಾಸಿಗರ ದಂಡೇ ಮುಖ ಮಾಡಿದೆ.
ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಲು ಸಹಸ್ರಾರು ಪ್ರವಾಸಿಗರು ಈಗಾಗಲೇ ಜಮಾಯಿಸಿದ್ದಾರೆ.
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಆದರೆ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ನ್ಯೂ ಇಯರ್ ಸೆಬಬ್ರೇಷನ್‌ಗೆ ಇಂದು ಮತ್ತು ನಾಳೆ ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಾಧ್ಯತೆಯಿದೆ.
ಇನ್ನು ಹಂಪಿಗೆ ಭೇಟಿ ನೀಡುವ ಪ್ರವಾಸಿಗರು ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ಧಾರ್ಮಿಕ ಕ್ಷೇತ್ರ ಹಂಪಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪ್ರಮುಖ ರಸ್ತೆಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆ ಮಾಡಲಾಗಿದೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…