ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲು ಕಾರಣಗಳೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಲ್ಲ. ಇದರ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆಯಾಗಬೇಕಿದೆ. ಯಾವ ಕಾರಣದಿಂದ ಅವರನ್ನು ಸಂಪುಟದಿಂದ ಕಿತ್ತು ಬಿಸಾಕಿದ್ದಾರೆ? ಎಂದು ಪ್ರಶ್ನೆ ಮಾಡಿದರು.
ಇನ್ನು ರಾಹುಲ್ ಗಾಂಧಿಯವರು ಕಳೆದ ವಾರ ಬೆಂಗಳೂರಿಗೆ ಬಂದು ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಕೊಡದೇ ಪಲಾಯನ ಮಾಡಿದ್ದಾರೆ. ಹೀಗಿರುವಾಗ ರಾಜಣ್ಣ ಅವರು ಸತ್ಯ ಬಹಿರಂಗಪಡಿಸಿದಾಗ ಅವರನ್ನು ಸಂಪುಟದಿಂದ ವಜಾ ಮಾಡಿದ್ದು ಸರಿಯಲ್ಲ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.





