ರಾಜ್ಯ

ಕೆ.ಎನ್.ರಾಜಣ್ಣ ಮಾಡಿದ ಘೋರ ಅಪರಾಧವೇನು?: ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲು ಕಾರಣಗಳೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರವಲ್ಲ. ಇದರ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆಯಾಗಬೇಕಿದೆ. ಯಾವ ಕಾರಣದಿಂದ ಅವರನ್ನು ಸಂಪುಟದಿಂದ ಕಿತ್ತು ಬಿಸಾಕಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಇನ್ನು ರಾಹುಲ್‌ ಗಾಂಧಿಯವರು ಕಳೆದ ವಾರ ಬೆಂಗಳೂರಿಗೆ ಬಂದು ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಕೊಡದೇ ಪಲಾಯನ ಮಾಡಿದ್ದಾರೆ. ಹೀಗಿರುವಾಗ ರಾಜಣ್ಣ ಅವರು ಸತ್ಯ ಬಹಿರಂಗಪಡಿಸಿದಾಗ ಅವರನ್ನು ಸಂಪುಟದಿಂದ ವಜಾ ಮಾಡಿದ್ದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

2 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

2 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

3 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

4 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

4 hours ago