ರಾಜ್ಯ

ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಕಟ್ಟುನಿಟ್ಟಿನ ಜಾರಿಗೆ ʼಹೈʼ ನಿರ್ದೇಶನ

ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು ೨೦೨೨ರ ನಿಯಮ ೧೩೮ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಕೆ. ಅರ್ಚನಾ ಭಟ್ ಎಂಬವರು ೨೦೨೩ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

ಅಲ್ಲದೆ, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಜಾರಿಗೆ ಬಂದಿಲ್ಲ. ಹೀಗಾಗಿ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿದೆ.

ಇದನ್ನೂ ಓದಿ:-ಮಡಿಕೇರಿ | ಬೀದಿ ನಾಯಿಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಜಾಗೃತಿ ಮುಂದುವರೆರಿಸಿ
ಮಾರುಕಟ್ಟೆಯಲ್ಲಿ ಸುರಕ್ಷತಾ ಪರಿಕರಗಳ ಲಭ್ಯತೆ ಖಚಿತಪಡಿಸಿಕೊಂಡ ಬಳಿಕ ರಾಜ್ಯದಲ್ಲಿ ನಿಯಮವನ್ನು ಜಾರಿಗೊಳಿಸಲು ಅಧಿಕಾರಿಗಳಿಗೆ ಪೀಠ ೬ ತಿಂಗಳ ಕಾಲಾವಕಾಶವನ್ನು ನೀಡಿತು. ಜೊತೆಗೆ ೯ ತಿಂಗಳಿಂದ ನಾಲ್ಕು ವರ್ಷದೊಳಗಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್ ಸೈಕಲ್ ಸವಾರನು ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಸಂಬಂಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮುಂದುವರಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಪೀಠ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ತಯಾರಕರಿಂದ ಪಡೆದ ಮಾಹಿತಿಯನ್ನು ಉಲ್ಲೇಖಿಸಿ, ಹೊಸ ಸುರಕ್ಷತಾ ಪರಿಕರಗಳು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೊದಲು ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ. ಆದ್ದರಿಂದ ಅವುಗಳ ತಯಾರಿಕೆಗೆ ಸಮಯ ಅಗತ್ಯವಿದೆ ಎಂದು ಪೀಠಕ್ಕೆ ತಿಳಿಸಿದರು.

ಹೊಸ ನಿಯಮಗಳು
ಮಕ್ಕಳಿಗಾಗಿ ಸುರಕ್ಷತಾ ಪರಿಕರಗಳನ್ನು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು, ೨೦೨೨ರ ಸೆಕ್ಷನ್ ೧೩೮(೭)ರ ಮೂಲಕ ಪರಿಚಯಿಸಲಾಗಿದೆ, ಇದನ್ನು ಫೆಬ್ರವರಿ ೧೫, ೨೦೨೨ರಂದು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೧೨೯ರ ಅಡಿ ಸೂಚಿಸಲಾಗಿದೆ. ಸುರಕ್ಷತಾ ಸಲಕರಣೆಗಳ ಜೊತೆಗೆ, ನಾಲ್ಕು ವರ್ಷ ವಯಸ್ಸಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್‌ಸೈಕಲ್ ವೇಗವು ಗಂಟೆಗೆ ೪೦ ಕಿ.ಮೀ.ಗಿಂತ ಹೆಚ್ಚಿರಬಾರದು ಎಂದು ಹೊಸ ನಿಯಮಗಳು ತಿಳಿಸಲಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago