ತುಮಕೂರು: ರಾಮನಗರಕ್ಕೆ ಹೇಮಾವತಿ ನದಿ ನೀರು ಕೊಂಡೊಯ್ಯಲು ನಡೆಯುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧದ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಇದರ ಜೊತೆಗೆ 144 ಸೆಕ್ಷನ್ ಜಾರಿ ಮಾಡಿ, ಪ್ರತಿಭಟನೆ ನಡೆಯದಂತೆ ಎಚ್ಚರ ವಹಿಸಲಾಗಿತ್ತು.
ಪ್ರತಿಭಟನೆಗೆ ಬರುತ್ತಿದ್ದ ಶಾಸಕ ಸುರೇಶ್ ಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೂ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.





