ಬೆಂಗಳೂರು: ಕ್ಯಾಂಟೀನ್‍ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ.
ಕ್ಯಾಂಟಿನ್‍ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ ನಾಗರಿಕರೇ ಆಗಿರುವುದರಿಂದ ಅಂತವರಿಗೆ ಸಕ್ಕರೆ ಕಾಯಿಲೆ ಇರುವುದು ಮಾಮೂಲಾಗಿರುವುದನ್ನುಮನಗಂಡು ಅನ್ನದ ಬದಲಿಗೆ ಮುದ್ದೆ, ಚಪಾತಿ ಭಾಗ್ಯ ಕಲ್ಪಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಮುದ್ದೆ, ಚಪ್ಪಾತಿ ಊಟದ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈಗಾಗಲೇ ಹೊಸ ಟೆಂಡರ್ ಕರೆದಿರುವ ಬಿಬಿಎಂಪಿ ಅಧಿಕಾರಿಗಳು ಇಂದಿರಾ ಕ್ಯಾಂಟಿನ್‍ಗಳಲ್ಲಿ ಮುದ್ದೆ, ಚಪ್ಪಾತಿ ಊಟದ ಉಲ್ಲೇಖ ಮಾಡಿದ್ದಾರೆ. ಈಗಾಗಿ ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಬಸಾರು, ಚಪ್ಪಾತಿ ಲಭ್ಯ ಎನ್ನಲಾಗಿದೆ.
ಇದರ ಜತೆಗೆ ಇಂದಿರಾ ಕ್ಯಾಂಟಿನ್ ಗ್ರಾಹಕರ ಸಂಖ್ಯೆಯಲ್ಲಿ ಗೋಲ್‍ಮಾಲ್ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಬಿಲ್ ಗಳ ಡಿಜಿಟಿಕರಣ ಹಾಗೂ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.
ನಗರದ ಯಾವುದೇ ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರು ಊಟ.ತಿಂಡಿ ಕೋಪನ್ ಪಡೆದರೆ ನೇರವಾಗಿ ಕೇಂದ್ರ ಕಛೇರಿಗೆ ಮಾಹಿತಿ ಬರಲಿದೆ ಇದಕ್ಕಾಗಿ ಪ್ರತ್ಯೇಕ ಅಯಪ್ ಅಭಿವೃದ್ಧಿ ಗೂ ಬಿಬಿಎಂಪಿ ಮನಸು ಮಾಡಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…