ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹಕ್ಕಿ ಜ್ವರ ಹಬ್ಬಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಗಡಿ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದ್ದಾರೆ.
ಕೋಳಿ ಫಾರ್ಮ್, ಹಾಗೂ ಹಕ್ಕಿ ಜ್ವರ ಇರುವ ಸುತ್ತಮುತ್ತಲಿನ ಪ್ರದೇಶಗಳಿಗೆ ಸ್ಪ್ರೇ, ಪೌಡರ್ ಸಿಂಪಡಣೆ ಮಾಡಲಾಗುತ್ತಿದೆ.
ಇನ್ನು ರಾಜ್ಯಕ್ಕೆ ಬರುವ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಲು ನಿರ್ಧರಿಸಲಾಗಿದೆ. ಗಡಿ ಭಾಗಗಳಿಂದ ಬರುವ ಕೋಳಿ ಉತ್ಪನ್ನಗಳ ಮೇಲೆ ತೀವ್ರ ನಿಗಾ ವಹಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ನು ಕೇರಳ ಹಾಗೂ ತಮಿಳುನಾಡು ಗಡಿಯಲ್ಲೂ ಕೂಡ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಕ್ಕಿ ಜ್ವರ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ.





