ರಾಜ್ಯ

ಕರ್ನಾಟಕಕ್ಕೆ ಹಕ್ಕಿ ಜ್ವರ ಕಂಟಕ: ರಾಜ್ಯದ ಗಡಿಗಳಲ್ಲಿ ಭಾರೀ ಕಟ್ಟೆಚ್ಚರ

ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹಕ್ಕಿ ಜ್ವರ ಹಬ್ಬಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಗಡಿ ಪ್ರದೇಶಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದ್ದಾರೆ.

ಕೋಳಿ ಫಾರ್ಮ್‌, ಹಾಗೂ ಹಕ್ಕಿ ಜ್ವರ ಇರುವ ಸುತ್ತಮುತ್ತಲಿನ ಪ್ರದೇಶಗಳಿಗೆ ಸ್ಪ್ರೇ, ಪೌಡರ್‌ ಸಿಂಪಡಣೆ ಮಾಡಲಾಗುತ್ತಿದೆ.

ಇನ್ನು ರಾಜ್ಯಕ್ಕೆ ಬರುವ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಲು ನಿರ್ಧರಿಸಲಾಗಿದೆ. ಗಡಿ ಭಾಗಗಳಿಂದ ಬರುವ ಕೋಳಿ ಉತ್ಪನ್ನಗಳ ಮೇಲೆ ತೀವ್ರ ನಿಗಾ ವಹಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇನ್ನು ಕೇರಳ ಹಾಗೂ ತಮಿಳುನಾಡು ಗಡಿಯಲ್ಲೂ ಕೂಡ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಕ್ಕಿ ಜ್ವರ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

1 hour ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

5 hours ago