ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಆರ್. ಅಶೋಕ್ ಮಾತನಾಡಿದ್ದಾರೆ.
ಸಂಸದೆ ಸುಮಲತಾ ಹಾಗೂ ವರಿಷ್ಠರ ನಡುವೆ ಯಾವ ರೀತಿ ಮಾತುಕತೆ ನಡದಿದೆಯೋ ನಮಗೆ ಗೊತ್ತಿಲ್ಲ. ಆದರೆ ಈ ವಿಚಾರದಲ್ಲಿ ಹೈಕಮಾಂಡ್ ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಸಂಸದೀಯ ಮಂಡಳಿ ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ. ಇದಕ್ಕಿಂತ ಮಿಗಿಲಾಗಿ ನಾನು ಏನು ಹೇಳುವುದಿಲ್ಲ. ಸುಮಲತಾ ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಯಕರು ಮಾತನಾಡಿದ್ದಾರೆ. ಇದರ ವಿವರ ರಾಜ್ಯ ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರ ಮಾತೆ ಅಂತಿಮವಾಗಿರುತ್ತದೆ ಎಂದು ಅಶೋಕ್ ಹೇಳಿದರು.
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ…
ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…
ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು…
ಟೆಹರಾನ್: ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ…
ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…