Mysore
25
overcast clouds
Light
Dark

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಎಚ್‌.ಸಿ ಮಹದೇವಪ್ಪ

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆಯ ಎಂಬ ಮಾಧ್ಯಮದವರ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ ಬಹಳ ನಾಜೂಕಾಗಿ ಉತ್ತರ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ನಾನಾಗಲಿ, ರಾಜಣ್ಣ ಆಗಲಿ ಬಯಸಿದರೇ ಅದು ವಯಕ್ತಿಕ ವಿಚಾರ ಅಗುತ್ತದೆ. ಅಧ್ಯಕ್ಷರಾಗಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಈ ಸಂಬಂಧ ನಾವು ಏನೇ ಮಾತನಾಡಿದರು, ಅದನ್ನು ಹೈಕಮಾಂಡ್‌ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಮಾಡಲಿದೆ ಈ ಬಗ್ಗೆ ಪರಾಮರ್ಶೆ ಬೇಡ ಎಂದು ಸಚಿವ ಎಚ್‌.ಸಿ ಮಹದೇವಪ್ಪ ಹೇಳಿದರು.

ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಕೆಪಿಸಿಸಿ ಕಚೇರಿಗಳಿಗೆ ಭೇಟಿ ನೀಡಬೇಕು, ಪಕ್ಷದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆ ಸಂಬಂಧ ಪಕ್ಷದ ಅಧ್ಯಕ್ಷರಾಗಿ ಅವರು ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅವರು ಅದನ್ನು ನನಗೆ ವಯಕ್ತಿಕವಾಗಿ ಹೇಳಿಲ್ಲ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗದಮ ಅಧಿಕಾರಿ ಚಂದ್ರಶೇಖರ್‌ ನಿಧನ ಬಗ್ಗೆ ಮಾತನಾಡಿ, ಅವರ ಸಾವು ಬಹಳ ನೋವು ತಂದಿದೆ. ಅವರು ಮರಣಪತ್ರದಲ್ಲಿ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆಗೆ ವಹಿಸಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಮಾಹಿತಿ ನೀಡಿದರು.