ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆಯ ಎಂಬ ಮಾಧ್ಯಮದವರ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಬಹಳ ನಾಜೂಕಾಗಿ ಉತ್ತರ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ನಾನಾಗಲಿ, ರಾಜಣ್ಣ ಆಗಲಿ ಬಯಸಿದರೇ ಅದು ವಯಕ್ತಿಕ ವಿಚಾರ ಅಗುತ್ತದೆ. ಅಧ್ಯಕ್ಷರಾಗಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಈ ಸಂಬಂಧ ನಾವು ಏನೇ ಮಾತನಾಡಿದರು, ಅದನ್ನು ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಮಾಡಲಿದೆ ಈ ಬಗ್ಗೆ ಪರಾಮರ್ಶೆ ಬೇಡ ಎಂದು ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.
ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಕೆಪಿಸಿಸಿ ಕಚೇರಿಗಳಿಗೆ ಭೇಟಿ ನೀಡಬೇಕು, ಪಕ್ಷದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸಂಬಂಧ ಪಕ್ಷದ ಅಧ್ಯಕ್ಷರಾಗಿ ಅವರು ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅವರು ಅದನ್ನು ನನಗೆ ವಯಕ್ತಿಕವಾಗಿ ಹೇಳಿಲ್ಲ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗದಮ ಅಧಿಕಾರಿ ಚಂದ್ರಶೇಖರ್ ನಿಧನ ಬಗ್ಗೆ ಮಾತನಾಡಿ, ಅವರ ಸಾವು ಬಹಳ ನೋವು ತಂದಿದೆ. ಅವರು ಮರಣಪತ್ರದಲ್ಲಿ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆಗೆ ವಹಿಸಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಮಾಹಿತಿ ನೀಡಿದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…