ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ವಿಶ್ವಾಸವಿಟ್ಟು ಹೈಕೋರ್ಟ್ ಈ ಆದೇಶವನ್ನು ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂಬ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತಹ ಸತ್ಯಾಂಶವಿರಲಿಲ್ಲ. ಆದ ಕಾರಣ ಹೈಕೋರ್ಟ್ ಈ ರೀತಿಯ ಆದೇಶ ನಿಡಿದೆ ಎಂದು ಹೇಳಿದರು.
ದೂರುದಾರರು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬೇಕಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲಿ. ನಮ್ಮ ಕಾನೂನು ತಂಡ ಅದಕ್ಕೆ ತಕ್ಕ ಉತ್ತರ ನೀಡುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳು ಸ್ವಾಭಾವಿಕವಾಗಿ ನ್ಯಾಯಾಯುತವಾಗಿ ಇರುತ್ತವೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದು ತಿಳಿಸಿದರು.