ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದು, ಈ ಸಂಬಂಧ ಇಂದು ಮಲ್ಯ ಪರ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿದರು. ಈ ಸಂಬಂಧ ಕೋರ್ಟ್, ಬ್ಯಾಂಕುಗಳಿಗೆ ನೋಟಿಸ್ ಜಾರಿ ಮಾಡಿದೆ.
6200 ಕೋಟಿ ರೂಪಾಯಿ ಸಾಲ ಕೊಡಬೇಕಿತು. ಅದರಲ್ಲಿ 14,000 ಕೋಟಿ ರೂ ವಸೂಲಾಗಿದೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ವಕೀಲ ಸಜನ್ ಪೂವಯ್ಯ ಮನವಿ ಮಾಡಿದರು.
ಇನ್ನು ವಿಜಯ್ ಮಲ್ಯ ಪರ ವಕೀಲ ಸಜನ್ ಪೂವಯ್ಯ ಅವರ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಬ್ಯಾಂಕ್‌ಗಳು ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಮುಂದಿನ ವಿಚಾರಣೆಯನ್ನು ಫೆಬ್ರವರಿ.19ಕ್ಕೆ ಮುಂದೂಡಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…