ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್ ತಾತ್ಕಾಲಿಕ್ ರಿಲೀಫ್ ನೀಡಿದೆ.
ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ.
ತನಿಖೆಗೆ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಫೆಬ್ರವರಿ.20ರವರೆಗೆ ಮಧ್ಯಂತರ ತಡೆ ನೀಡಿದೆ.
ಬಳಿಕ ದೂರುದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನೋಟಿಸ್ ಜಾರಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿಗೆ ರಿಲೀಫ್ ಸಿಕ್ಕಿದಂತಾಗಿದ್ದು, ಫೆಬ್ರವರಿ.20ರವರೆಗೂ ಮಧ್ಯಂತರ ತಡೆ ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ವಾರವೇ ವಿಚಾರಣೆಗೆ ಹಾಜರಾಗಿ ಅಂದಿನ ಘಟನೆಗಳ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.