ರಾಜ್ಯ

ಅಶ್ಲೀಲ ಪದ ಬಳಕೆ ಪ್ರಕರಣ: ಎಂಎಲ್‌ಸಿ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ.

ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ.

ತನಿಖೆಗೆ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಫೆಬ್ರವರಿ.20ರವರೆಗೆ ಮಧ್ಯಂತರ ತಡೆ ನೀಡಿದೆ.

ಬಳಿಕ ದೂರುದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನೋಟಿಸ್‌ ಜಾರಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿಗೆ ರಿಲೀಫ್‌ ಸಿಕ್ಕಿದಂತಾಗಿದ್ದು, ಫೆಬ್ರವರಿ.20ರವರೆಗೂ ಮಧ್ಯಂತರ ತಡೆ ನೀಡಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಹೈಕೋರ್ಟ್‌ ನೋಟಿಸ್‌ ನೀಡಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಈ ವಾರವೇ ವಿಚಾರಣೆಗೆ ಹಾಜರಾಗಿ ಅಂದಿನ ಘಟನೆಗಳ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

46 mins ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

1 hour ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

1 hour ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

2 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

5 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

5 hours ago