ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ಅವರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಈ ಕುರಿತು ಇಂದು(ಡಿಸೆಂಬರ್.17) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ವಿಚಾರಣೆ ನಡೆಸಿ, ಸ್ನೇಹಮಯಿ ಕೃಷ್ಣ ವಿರುದ್ಧದ ಎಫ್‌ಐಆರ್ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಏನಿದು ಪ್ರಕರಣ?
ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರು ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ದೂರನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ಏನು?
ಸ್ನೇಹಮಯಿ ಕೃಷ್ಣ ಅವರು ಚಾಮುಂಡೇಶ್ವರಿ ದೇವಿಗೆ ಬಂದಿರುವ ಹರಕೆ ಸೀರೆ ಮಾರಾಟ ಮಾಡಲಾಗುತ್ತಿದೆ ಎಂದು ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರ ವಿರುದ್ಧ ಆರೋಪಿಸಿದ್ದರು. ಆದರೆ ಈ ದೂರನ್ನು ಪೊಲೀಸರು ದಾಖಲಿಸಿಕೊಳ್ಳದೇ ಸ್ನೇಹಮಯಿ ಕೃಷ್ಣ ವಿರುದ್ಧವೇ ಕಾರ್ಯದರ್ಶಿ ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು.