ರಾಜ್ಯ

ಸ್ನೇಹಮಯಿ ಕೃಷ್ಣ ವಿರುದ್ಧದ ಎಫ್‌ಐಆರ್‌: ಹೈಕೋರ್ಟ್‌ನಿಂದ ತಡೆಯಾಜ್ಞೆ

ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ಅವರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಈ ಕುರಿತು ಇಂದು(ಡಿಸೆಂಬರ್‌.17) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ವಿಚಾರಣೆ ನಡೆಸಿ, ಸ್ನೇಹಮಯಿ ಕೃಷ್ಣ ವಿರುದ್ಧದ ಎಫ್‌ಐಆರ್‌ ತನಿಖೆಗೆ  ತಡೆಯಾಜ್ಞೆ ನೀಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಏನಿದು ಪ್ರಕರಣ?

ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರು ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಮೈಸೂರಿನ ಕೃಷ್ಣರಾಜ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಈ ದೂರನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ಏನು?

ಸ್ನೇಹಮಯಿ ಕೃಷ್ಣ ಅವರು ಚಾಮುಂಡೇಶ್ವರಿ ದೇವಿಗೆ ಬಂದಿರುವ ಹರಕೆ ಸೀರೆ ಮಾರಾಟ ಮಾಡಲಾಗುತ್ತಿದೆ ಎಂದು ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರ ವಿರುದ್ಧ ಆರೋಪಿಸಿದ್ದರು. ಆದರೆ ಈ ದೂರನ್ನು ಪೊಲೀಸರು ದಾಖಲಿಸಿಕೊಳ್ಳದೇ ಸ್ನೇಹಮಯಿ ಕೃಷ್ಣ ವಿರುದ್ಧವೇ ಕಾರ್ಯದರ್ಶಿ ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿತ್ತು.

 

 

ಅರ್ಚನ ಎಸ್‌ ಎಸ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

8 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

8 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

8 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

8 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

8 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

9 hours ago