ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಇದೇ 24ರವರೆಗೆ ವಿಸ್ತರಿಸಿದೆ.
ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾ.ಕೆ.ನಟರಾಜನ್ ಪೀಠದಲ್ಲಿ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ನ್ಯಾಯಪೀಠ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆ ಆದೇಶವನ್ನು ವಿಸ್ತರಿಸಿತು. ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ಎಫ್ಐಆರ್ ರದ್ದುಗೊಳಿಸಲು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.