ಮೈಸೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಜೆಡಿಎಸ್‌ನ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೊಳೆನರಸೀಪುರ ಪೊಲೀಸರು ಇಂದು ರೇವಣ್ಣ ಅವರಿಗೆ ನೋಟಿಸ್ ತಲುಪಿಸಿದ್ದು, ನೋಟಿಸ್ ತಲುಪಿಸ ಐದು ದಿನಗಳಲ್ಲಿ ಹೈಕೋರ್ಟ್‌ನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದೆ.
ಮೈಸೂರಿನ ಕೆ.ಆರ್ ನಗರ ಠಾಣೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣನನ್ನು ಎಸ್‌ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್‌ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆ ಆಗಿದ್ದರು.
ರೇವಣ್ಣ ಅವರು ಜಾಮೀನನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೇಟ್ಟಿಲೇರಿತ್ತು. ಅದರಂತೆ ಹೈಕೋರ್ಟ್ ರೇವಣ್ಣನನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.





