ರಾಜ್ಯ

ಎಚ್‌.ಡಿ ರೇವಣ್ಣಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್

ಮೈಸೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಜೆಡಿಎಸ್‌ನ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಹೊಳೆನರಸೀಪುರ ಪೊಲೀಸರು ಇಂದು ರೇವಣ್ಣ ಅವರಿಗೆ ನೋಟಿಸ್‌ ತಲುಪಿಸಿದ್ದು, ನೋಟಿಸ್‌ ತಲುಪಿಸ ಐದು ದಿನಗಳಲ್ಲಿ ಹೈಕೋರ್ಟ್‌ನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದೆ.

ಮೈಸೂರಿನ ಕೆ.ಆರ್‌ ನಗರ ಠಾಣೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣನನ್ನು ಎಸ್‌ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್‌ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆ ಆಗಿದ್ದರು.

ರೇವಣ್ಣ ಅವರು ಜಾಮೀನನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್‌ ಮೇಟ್ಟಿಲೇರಿತ್ತು. ಅದರಂತೆ ಹೈಕೋರ್ಟ್‌ ರೇವಣ್ಣನನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿಗೊಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

33 mins ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

35 mins ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

38 mins ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

41 mins ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

48 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

52 mins ago