ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿ.ಟಿ.ರವಿ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು(ಡಿಸೆಂಬರ್.20) ಹೈಕೋರ್ಟ್‌ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಏಕಸದಸ್ಯ ಪೀಠವೂ ವಿಚಾರಣೆ ನಡೆಸಿ ತಕ್ಷಣ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಲಾಗಿದದೆ ಎಂದು ತೀರ್ಪು ಪ್ರಕಟಿಸಿದೆ.
ಈ ಕುರಿತು ಇಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಸಿ.ಟಿ.ರವಿ ಅವರನ್ನು ಬಿಡುಗಡೆಗೊಳಿಸಬೇಕೆಂದು ಆದೇಶಿಸಿದೆ. ಅಲ್ಲದೇ ಈ ಎಫ್‌ಐಆರ್ ಅನ್ವಯ ಸಿ.ಟಿ.ರವಿ ಅವರು ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿದೆ.
ಏನಿದು ಪ್ರಕರಣ?
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಬೆಳಗಾವಿಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ಪ್ರಕರಣದ ಅನ್ವಯ ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯ ವಿಚಾರಣೆ ನಡೆಸಿ, ನಂತರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿಚಾರಣೆ ನಡೆಸುವಂತೆ ಪ್ರಕರಣವನ್ನು ಹಸ್ತಾಂತರಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವೂ ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.