ರಾಜ್ಯ

ಸಿ.ಟಿ.ರವಿ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಸಿ.ಟಿ.ರವಿ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು(ಡಿಸೆಂಬರ್‌.20) ಹೈಕೋರ್ಟ್‌ನ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರಿದ್ದ ಏಕಸದಸ್ಯ ಪೀಠವೂ ವಿಚಾರಣೆ ನಡೆಸಿ ತಕ್ಷಣ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಲಾಗಿದದೆ ಎಂದು ತೀರ್ಪು ಪ್ರಕಟಿಸಿದೆ.

ಈ ಕುರಿತು ಇಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಸಿ.ಟಿ.ರವಿ ಅವರನ್ನು ಬಿಡುಗಡೆಗೊಳಿಸಬೇಕೆಂದು ಆದೇಶಿಸಿದೆ. ಅಲ್ಲದೇ ಈ ಎಫ್‌ಐಆರ್‌ ಅನ್ವಯ ಸಿ.ಟಿ.ರವಿ ಅವರು ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿದೆ.

ಏನಿದು ಪ್ರಕರಣ?

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್‌ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಬೆಳಗಾವಿಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಎಫ್‌ಐಆರ್‌ ಪ್ರಕರಣದ ಅನ್ವಯ ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯ ವಿಚಾರಣೆ ನಡೆಸಿ, ನಂತರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿಚಾರಣೆ ನಡೆಸುವಂತೆ ಪ್ರಕರಣವನ್ನು ಹಸ್ತಾಂತರಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವೂ ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

 

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago